ರಾಜ್ಯ

ಕಾಲ್ತುಳಿತ ದುರಂತ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಕೆಎಸ್‌ಸಿಎ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಕೆಎಸ್‌ಸಿಎ ಆಡಳಿತ ಮಂಡಳಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದೆ.

ಕೆಎಸ್‌ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ.ಶಂಕರ್‌, ಖಜಾಂಚಿ ಜೈರಾಮ್‌ ಅವರು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ಹಾಗೂ ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ನಿನ್ನೆ ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

1 hour ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago