ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಘಟನೆಯ ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಖಜಾಂಚಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಎಸ್‌ಸಿಎ ಕಾರ್ಯದರ್ಶಿ ಶಂಕರ್ ಹಾಗೂ ಖಜಾಂಚಿ ಜೈರಾಮ್ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ. ಈ ಇಬ್ಬರೂ ಅಧಿಕಾರಿಗಳು ಪದಾಧಿಕಾರಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತೆರವುಗೊಂಡ ಸ್ಥಾನಕ್ಕೆ ತಾತ್ಕಾಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ದಿನದಿಂದ ದಿನಕ್ಕೆ ಈ ಪ್ರಕರಣ ತೀವ್ರ ಕಾವು ಪಡೆದುಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.





