ರಾಜ್ಯ

ಕಾಲ್ತುಳಿತ ದುರಂತ ಪ್ರಕರಣ: ವಾಸ್ತವ ಸಂಗತಿ ಬಗ್ಗೆ ಕೋರ್ಟ್‌ಗೆ ವರದಿ ನೀಡುತ್ತೇವೆ ಎಂದ ಪರಮೇಶ್ವರ್‌

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಹೈಕೋರ್ಟ್‌ನಲ್ಲಿ ಪಿಐಎಲ್‌ ಅರ್ಜಿ ವಿಚಾರಣೆ ನಡೆಯಲಿದೆ. ಕಾಲ್ತುಳಿತ ದುರಂತದ ಬಗ್ಗೆ ವಾಸ್ತವ ಸಂಗತಿ ಏನಿದೆ ಎಂದು ನ್ಯಾಯಾಲಯಕ್ಕೆ ವರದಿ ಕೊಡುತ್ತೇವೆ. ಸರ್ಕಾರದ ಪರ ಏನು ಹೇಳಬೇಕು ಎಂಬುದರ ಬಗ್ಗೆ ನಿನ್ನೆಯೇ ಚರ್ಚೆಯಾಗಿದೆ ಎಂದರು.

ಇನ್ನು ಸಿಎಂ ಹಾಗೂ ಡಿಸಿಎಂ ದೆಹಲಿಗೆ ಹೋಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕಮಾಂಡ್‌ ಕರೆಯ ಮೇರೆಗೆ ದೆಹಲಿಗೆ ಹೋಗಿದ್ದಾರೆ. ನನ್ನನ್ನು ದೆಹಲಿಗೆ ಕರೆದಿಲ್ಲ. ಹೈಕಮಾಂಡ್‌ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

42 mins ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

1 hour ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

1 hour ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

3 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

5 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

10 hours ago