ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವ ಬೆನ್ನಲ್ಲೇ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.
ಇದನ್ನೂ ಓದಿ:- ಕಾಲ್ತುಳಿತದಲ್ಲಿ 11 ಮಂದಿ ಸಾವು: ಉಸಿರಾಟದ ಸಮಸ್ಯೆಯಿಂದಲೇ ಮೃತಪಟ್ಟಿರುವುದು ದೃಢ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದ್ದು, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇಂದು ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.





