ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದ ಪರಿಣಾಮ ಇಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರ ಮಾಡಿದೆ.
ನವೆಂಬರ್.13ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಎ ಹಾಗೂ ಸೌತ್ ಆಫ್ರಿಕಾ ಎ ನಡುವಣ ಪಂದ್ಯಗಳನ್ನು ಆಯೋಜನೆ ಮಾಡಲಾಗಿತ್ತು.
ಆದರೆ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಿಂದ ರಾಜ್‌ಕೋಟ್‌ಗೆ ಪಂದ್ಯಗಳನ್ನು ಸ್ಥಳಾಂತರ ಮಾಡಿದೆ. ಈ ಬಗ್ಗೆ ನಿರ್ದಿಷ್ಟ ಕಾರಣ ನೀಡದ ಬಿಸಿಸಿಐ, ಪಂದ್ಯ ಸ್ಥಳಾಂತರ ಬಗ್ಗೆಯಷ್ಟೇ ಮಾಹಿತಿ ನೀಡಿದೆ.





