ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ ಕೆಎಸ್‌ಸಿಎ ಹಾಗ ಆರ್‌ಸಿಬಿ ಮ್ಯಾನೇಜ್ಮೆಂಟ್ ವತಿಯಿಂದ 1 ಕೋಟಿ ಪರಿಹಾರ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ವಿಪಕ್ಷಗಳು ಜನರ ದಾರಿ ತಪ್ಪಿಸುತ್ತವೆ. ನಮ್ಮ ಹಿರಿಯರು ಇದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ. ರಾಜಕಾರಣಕ್ಕಿಂತ ಘಟನೆ ಯಾಕೆ ಆಯಿತು ಎಂದು ಗೊತ್ತಾಗಬೇಕು. ಇಂತಹ ದುರ್ಘಟನೆ ನಡೆದಿದ್ದು ನಿಜಕ್ಕೂ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು 10 ಲಕ್ಷ ಪರಿಹಾರ ನೀಡಿರುವ ರಾಜ್ಯ ಸರ್ಕಾರಕ್ಕೆ ಇನ್ನೂ ಹೆಚ್ಚಿನ ಪರಿಹಾರ ಹೆಚ್ಚಿಸುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದರು.



