ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಕ್ಕೆ ಅಗ್ರಮನ್ನಣೆ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು 2 ಲಕ್ಷಕ್ಕೂ ಹೆಚ್ಚು ಡಿಪಿಐಐಟಿ ಮಾನ್ಯತೆ ಪಡೆದ ಸ್ಟಾರ್ಟ್‌ಅಪ್‌ಗಳ ಉದಯಕ್ಕೆ ಸಾಕ್ಷಿಯಾಗಿದೆ. ಅವುಗಳಲ್ಲಿ ಸುಮಾರು ಅರ್ಧದಷ್ಟು 2ನೇ ಮತ್ತು 3ನೇ ಹಂತದ ನಗರಗಳಿಂದ ಹೊರಹೊಮ್ಮಿದ್ದು, ನಾವೀನ್ಯತೆ ಮಹಾನಗರಗಳಿಗೆ ಮಾತ್ರ ಸೀಮಿತ ಎಂಬ ಪುರಾತನ ಸಂಕಥನವನ್ನು ತೊಡೆದುಹಾಕಿದೆ ಎಂದಿದ್ದಾರೆ.
ಇದು ಕೇವಲ ನೀತಿ ಒಂದರ ಯಶಸ್ಸಲ್ಲ, ಇದು ಭಾರತದ ಸಶಕ್ತ ಮತ್ತು ಅನಿರ್ಭರತೆಯ ಪರಿವರ್ತನಾತ್ಮಕ ಹೆಜ್ಜೆಯಾಗಿದೆ. ಆತ್ಮವಿಶ್ವಾಸದ ಹೊಸ ಪೀಳಿಗೆಯು ಆತ್ಮನಿರ್ಭರ ಭಾರತವನ್ನು ನಿರ್ಮಿಸಲು, ನಾವೀನ್ಯತೆಯ ಮೂಲಕ ಬಹುದೊಡ್ಡ ಕೊಡುಗೆ ನೀಡುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವನಾಗಿ ನಮ್ಮ ಪ್ರಮುಖ ವಲಯಗಳನ್ನು ಪುನರುಜ್ಜೀವನಗೊಳಿಸುತ್ತಿರುವ ಈ ಉದ್ಯಮಶೀಲತಾ ಮನೋಭಾವವನ್ನು ಹೃದಯಪೂರ್ವಕವಾಗಿ ಪ್ರಶಂಸಿಸುತ್ತೇನೆ.
ನಮ್ಮೆಲ್ಲಾ ನವೋದ್ಯಮಿಗಳಿಗೆ ಅಭಿನಂದನೆಗಳು ಮತ್ತು ಈ ಪರಿವರ್ತನಾತ್ಮಕ ವ್ಯವಸ್ಥೆಗೆ ಪ್ರೇರಕ ಶಕ್ತಿಯಾಗಿರುವ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಭವಿಷ್ಯದ ದಶಕವು ಭಾರತೀಯ ನಾವೀನ್ಯತೆಯ ಯುಗ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆ…
ಹನೂರು : ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ…
ಚೆನ್ನೈ : ಕಾಲಿವುಡ್ ನಟ ಧನುಷ್ ಸ್ಟಾರ್ ನಟಿಯನ್ನು ಕೈ ಹಿಡಿಯಲು ಸಿದ್ದರಾಗಿದ್ದಾರೆ. ಹೌದು ಹೀಗೊಂದು ಸುದ್ದಿ ಸಿನಿಮಾ ಇಂಡಸ್ಟ್ರಿಯಲ್ಲಿ…
ಮುಂಬೈ : ವೋಟಿ ಚೋರಿ ವಿರುದ್ಧ ಸಮರ ಸಾರಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ…
ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ ಮಾ.19ರಂದು ದಿಲ್ಲಿಯ ರಾಮ್ಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಮೈಸೂರು : ಕೃಷಿ ಉತ್ಪನ್ನಗಳಿಗೆ…
ಮೈಸೂರು : ಎಲ್ಲವನ್ನೂ ಸಾಧ್ಯವಾಗಿಸಿದ ವಿಜ್ಞಾನಕ್ಕೆ ಕಲೆ, ಸಂಸ್ಕೃತಿ ಕೂಡದಿದ್ದರೆ ಮೃಗೀಯ ವರ್ತನೆ ಬರುತ್ತದೆ. ಅಧುನೀಕರಣ ನಮ್ಮ ಮೂಲ ಪರಂಪರೆಯನ್ನು…