ಬೆಂಗಳೂರು : ಕಳೆದ 10 ವರ್ಷಗಳಲ್ಲಿ ಸ್ಟಾರ್ಟ್‌ಅಪ್ ಇಂಡಿಯಾ ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಮತ್ತು ಆರ್ಥಿಕ ಪರಿವರ್ತನೆಗೆ ನಾಂದಿ ಹಾಡಿದೆ. ಅಲ್ಲದೆ ವಿಜ್ಞಾನ, ತಂತ್ರಜ್ಞಾನ ಹಾಗೂ ಆವಿಷ್ಕಾರಕ್ಕೆ ಅಗ್ರಮನ್ನಣೆ ನೀಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು 2 ಲಕ್ಷಕ್ಕೂ ಹೆಚ್ಚು ಡಿಪಿಐಐಟಿ ಮಾನ್ಯತೆ ಪಡೆದ ಸ್ಟಾರ್ಟ್‌ಅಪ್‌ಗಳ ಉದಯಕ್ಕೆ ಸಾಕ್ಷಿಯಾಗಿದೆ. ಅವುಗಳಲ್ಲಿ ಸುಮಾರು ಅರ್ಧದಷ್ಟು 2ನೇ ಮತ್ತು 3ನೇ ಹಂತದ ನಗರಗಳಿಂದ ಹೊರಹೊಮ್ಮಿದ್ದು, ನಾವೀನ್ಯತೆ ಮಹಾನಗರಗಳಿಗೆ ಮಾತ್ರ ಸೀಮಿತ ಎಂಬ ಪುರಾತನ ಸಂಕಥನವನ್ನು ತೊಡೆದುಹಾಕಿದೆ ಎಂದಿದ್ದಾರೆ.
ಇದು ಕೇವಲ ನೀತಿ ಒಂದರ ಯಶಸ್ಸಲ್ಲ, ಇದು ಭಾರತದ ಸಶಕ್ತ ಮತ್ತು ಅನಿರ್ಭರತೆಯ ಪರಿವರ್ತನಾತ್ಮಕ ಹೆಜ್ಜೆಯಾಗಿದೆ. ಆತ್ಮವಿಶ್ವಾಸದ ಹೊಸ ಪೀಳಿಗೆಯು ಆತ್ಮನಿರ್ಭರ ಭಾರತವನ್ನು ನಿರ್ಮಿಸಲು, ನಾವೀನ್ಯತೆಯ ಮೂಲಕ ಬಹುದೊಡ್ಡ ಕೊಡುಗೆ ನೀಡುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವನಾಗಿ ನಮ್ಮ ಪ್ರಮುಖ ವಲಯಗಳನ್ನು ಪುನರುಜ್ಜೀವನಗೊಳಿಸುತ್ತಿರುವ ಈ ಉದ್ಯಮಶೀಲತಾ ಮನೋಭಾವವನ್ನು ಹೃದಯಪೂರ್ವಕವಾಗಿ ಪ್ರಶಂಸಿಸುತ್ತೇನೆ.
ನಮ್ಮೆಲ್ಲಾ ನವೋದ್ಯಮಿಗಳಿಗೆ ಅಭಿನಂದನೆಗಳು ಮತ್ತು ಈ ಪರಿವರ್ತನಾತ್ಮಕ ವ್ಯವಸ್ಥೆಗೆ ಪ್ರೇರಕ ಶಕ್ತಿಯಾಗಿರುವ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಭವಿಷ್ಯದ ದಶಕವು ಭಾರತೀಯ ನಾವೀನ್ಯತೆಯ ಯುಗ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…