ಬೆಂಗಳೂರು: ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಆಗಮನ ಹಿನ್ನೆಲೆ ಮಂಡ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಅಮಿತ್ ಶಾರನ್ನು ಬರಮಾಡಿಕೊಂಡ ಬಿಜೆಪಿ ನಾಯಕರುಬೆಂಗಳೂರು: ರಾಜ್ಯಕ್ಕೆ 2 ದಿನಗಳ ಭೇಟಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಇಂದು ಮಂಡ್ಯ ಜಿಲ್ಲೆಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗುರುವಾರದಂದು ವಲಯ ಐಜಿಪಿ ಅಲೋಕ್ ಕುಮಾರ್, ದಕ್ಷಿಣ ವಿಶ್ವವಿದ್ಯಾನಿಲಯಕ್ಕೆ ಆಗಮಿಸಿದ ಪ್ರವೀಣ್ ಮಧುಕರ್ ಪವಾರ್, ಮಂಡ್ಯ ವಿಶ್ವವಿದ್ಯಾನಿಲಯಕ್ಕೆ ಆಗಮಿಸಿ ಭದ್ರತೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಮತ್ತು ನಿರ್ಗಮನದ ವೇಳೆ ಭದ್ರತಾ ಲೋಪವಾಗದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳು ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ. ಬಂದೋಬಸ್ತ್ ವ್ಯವಸ್ಥೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಗೋಪಾಲಯ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಚರ್ಚೆ ನಡೆಸಿದರು.ಅಮಿತ್ ಶಾ ಅವರು ಹೆಲಿಕಾಪ್ಟರ್ನಲ್ಲಿ ಬಂದಿಳಿಯಲು ಅನುಕೂಲವಾಗುವಂತೆ ನಗರದ ಪಿಐಟಿ ಕ್ರೀಡಾಂಗಣದಲ್ಲಿ ಮೂರು ಹೆಲಿಕಾಪ್ಟರ್ಗಳನ್ನು ನಿರ್ಮಿಸಲಾಗಿದೆ. ಜೊತೆಗೆ, ಮದ್ದೂರು ತಾಲೂಕಿನ ಹುಲಿಗೆರೆಪುರದಲ್ಲೂ ಹೆಲಿಪ್ಯಾಡ್ ನಿರ್ಮಿಸಲಾಗಿದೆ.