ರಾಜ್ಯ

ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಅಂತ ಬಹಿರಂಗವಾಗಿ ಹೇಳಲಿ. ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಪ್ಲಸ್ ಮೈನಸ್ ನೋಡಿ ಅದು ಫೇಲ್ ಆಯಿತು ಅಂದ್ರೆ ಮತ್ತೆ ಬೇರೆ ಹೆಸರು ಬಿಟ್ಟು ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು

ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗೋದಿಲ್ಲ. ಆದರೆ ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತೆ ಅಂತ ಆಶಾಭಾವನೆ ಮೂಡಿಸಿ ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು, ಕಾರ್ಯಕರ್ತರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತೆ. 104 ಇದ್ದಾಗಾಲೇ ಏನು ಮಾಡಲು ಆಗಿಲ್ಲ ಈಗ ಏನು ಮಾಡಲು ಸಾಧ್ಯ ಎಂದು ಸವಾಲು ಹಾಕಿದ್ದಾರೆ.

ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ. ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಸಹಜವಾಗಿ ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ. ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಹೊರತು ಜಿಲ್ಲೆಯ ಬಗ್ಗೆ ಹೇಳಿಲ್ಲ ಎಂದರು.

ಡಿಕೆಶಿ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ್ದಾರೆ. ಈ ರೀತಿ ಹೇಳಿಕೆ ಮುಖಾಂತರ ಅಭಿವೃದ್ಧಿಗೆ ಒತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡುವುದು ಸ್ಟಾರ್ಟ್ ಆಗಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆ ಅನುಕೂಲ ಆಗುವುದನ್ನು ನೋಡಬೇಕು ಎಂದರು.

ಕುಮಾರಸ್ವಾಮಿ ಏನೇ ಟಿಕೆ ಮಾಡಿದರು ಅದಕ್ಕೆ ಪುರಾವೆ ಇರಬೇಕು. ಜಾರ್ಜ್ ಮನೆಯಲ್ಲಿ ಸಿದ್ದರಾಮಯ್ಯ ಏನು ಮಾಡಿದರು ಅಂತ ಪ್ರಶ್ನೆ ಮಾಡಿದ್ರೆ ಅದು ಪ್ರಶ್ನೆಯಾಗಿಯೇ ಉಳಿಯಲಿದೆ. ಪೆನ್ ಡ್ರೈವ್ ವಿಚಾರದಲ್ಲಿಯೂ‌ ಇದೆ ಆಯಿತು. ಟೀಕೆ ಮಾಡುವ ಸಲುವಾಗಿ ಟ್ವೀಟ್ ಮಾಡಿದ್ರೆ ಅದರಿಂದ ಏನು ಉಪಯೋಗ ಆಗಲ್ಲ. ಮಾಧ್ಯಮದಲ್ಲಿ ಚರ್ಚೆ ಆಗುತ್ತೆ ಹೊರೆತು ವಾಸ್ತವವಾಗಿ ಏನು ಗೊತ್ತಾಗುವುದಿಲ್ಲ ಎಂದು ಹೇಳಿದರು.

andolanait

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

4 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

5 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

5 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

5 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

5 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

5 hours ago