Mysore
25
scattered clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಕೇಂದ್ರ ಬಜೆಟ್‌ಗೆ ರಾಜ್ಯ ಬಿಜೆಪಿ ನಾಯಕರ ಮೆಚ್ಚುಗೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್‌ ಇದು 25 ಕೋಟಿ ಜನ ಕಳೆದ ಹತ್ತು ವರ್ಷಗಳಲ್ಲಿ ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ. ಶ್ರೀಗಂಧ ಬೆಳೆಗೆ ವಿಶೇಷ ಯೋಜನೆ ಮಾಡಲಾಗಿದೆ. ರಸಗೊಬ್ಬರ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕ ಕಡಿಮೆ ಆಗಿದೆ ಎಂದು ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದರು.

ಇನ್ನು ಆರ್.‌ಅಶೋಕ್‌ ಮಾತನಾಡಿ, ಬಜೆಟ್‌ನಲ್ಲಿ ಜನ ಹಿತದ ಕಡೆ ಗಮನ ಕೊಟ್ಟಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕೇಂದ್ರವೇ ಹಾಸ್ಟೆಲ್‌ ಸ್ಥಾಪಿಸಲು ಮುಂದೆ ಬಂದಿದೆ. ರತೆಂಗು ಅಭಿವೃದ್ಧಿಗೂ ಉತ್ತೇಜನ ನೀಡಲಾಗಿದೆ. ಕ್ಯಾನ್ಸರ್‌ ಔಷಧಿಗೆ ವಿನಾಯಿತಿ ಕೊಡಲಾಗಿದೆ. ಇದು ಜನಹಿತದ ಬಜೆಟ್‌, ತೆರಿಗೆ ಹೊರೆ ಹಾಕದ ಬಜೆಟ್‌ ಎಂದು ತಿಳಿಸಿದರು.

Tags:
error: Content is protected !!