ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಅವರು, ದೇಶದ ಸರ್ವಾಂಗೀಣ ಅಭಿವೃದ್ಧಿಯ ಬಜೆಟ್ ಇದು 25 ಕೋಟಿ ಜನ ಕಳೆದ ಹತ್ತು ವರ್ಷಗಳಲ್ಲಿ ಬಡತನ ರೇಖೆಯಿಂದ ಹೊರಗೆ ಬಂದಿದ್ದಾರೆ. ಶ್ರೀಗಂಧ ಬೆಳೆಗೆ ವಿಶೇಷ ಯೋಜನೆ ಮಾಡಲಾಗಿದೆ. ರಸಗೊಬ್ಬರ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕ ಕಡಿಮೆ ಆಗಿದೆ ಎಂದು ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದರು.
ಇನ್ನು ಆರ್.ಅಶೋಕ್ ಮಾತನಾಡಿ, ಬಜೆಟ್‌ನಲ್ಲಿ ಜನ ಹಿತದ ಕಡೆ ಗಮನ ಕೊಟ್ಟಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕೇಂದ್ರವೇ ಹಾಸ್ಟೆಲ್ ಸ್ಥಾಪಿಸಲು ಮುಂದೆ ಬಂದಿದೆ. ರತೆಂಗು ಅಭಿವೃದ್ಧಿಗೂ ಉತ್ತೇಜನ ನೀಡಲಾಗಿದೆ. ಕ್ಯಾನ್ಸರ್ ಔಷಧಿಗೆ ವಿನಾಯಿತಿ ಕೊಡಲಾಗಿದೆ. ಇದು ಜನಹಿತದ ಬಜೆಟ್, ತೆರಿಗೆ ಹೊರೆ ಹಾಕದ ಬಜೆಟ್ ಎಂದು ತಿಳಿಸಿದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…