ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ದೈನಂದಿನ ಖರ್ಚಿಗೂ ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್ ಆಗಿದೆ ಎಂಬುದನ್ನು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…
ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …
ಜಾ.ದಳ ಸಮಾವೇಶ, ಯಡಿಯೂರೋತ್ಸವದ ಮೂಲಕ ಮತದಾರರ ಗಮನ ಸೆಳೆಯಲು ಯತ್ನ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಬಿಜೆಪಿ-ಜಾ.ದಳ ಪಾಳೆಯಗಳಿಗೆ ಹರ್ಷ ತಂದಿರುವುದು…
ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…
ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…
ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…