ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ಅನ್ನು ಮಂಡನೆ ಮಾಡಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಇನ್ನು ಕಾಲೇಜುಗಳಲ್ಲಿ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆ ಜಾರಿ ಜಾರಿ ಮಾಡಲಾಗುತ್ತದೆ. ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ನಿರ್ಧಾರ ಮಾಡಲಾಗಿದೆ. ಧಾರವಾಡ, ಬೆಂಗಳೂರಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ಅಧ್ಯಯನ ಕೇಂದ್ರ ನಿರ್ಮಿಸಲಾಗುವುದು ಎಂದು ಹೇಳಿದರು.





