ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಮಂಡನೆ ಮಂಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿ ನಿರ್ಧಾರ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರು ಸಮವಸ್ತ್ರ ವಿತರಣೆ ಮಾಡಲಾಗುವುದು. ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು. 30 ಸಾವಿರ ರೂಪಾಯಿಯಿಂದ 45 ಸಾವಿರ ರೂಗೆ ಹೆಚ್ಚಳ ಮಾಡಲಾಗುವುದು. 18 ವರ್ಷದ ಮಕ್ಕಳಿಗಾಗಿ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿದರು.





