ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಿದರು.
ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 16 ವರ್ಷದ ಒಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ಮೊಬೈಲ್ ಗೀಳು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ ಅವರು, ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಪುನರಾರಂಭ ಮಾಡಲಾಗುತ್ತದೆ ಎಂದರು.
ಇನ್ನು ಮಕ್ಕಳ ಮಾದಕ ವ್ಯಸನ ಚಿಕಿತ್ಸೆಗೆ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದ್ದು, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.





