ರಾಜ್ಯ

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ 2026 -27 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 6 ರಿಂದ 14 ದಿನಗಳ ಕಾಲ ಅಂದರೆ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ತೀರ್ಮಾನಿಸಲಾಯಿತು.

ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್  6 ಈ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನು ಹೊಂದಿರುವುದರಿಂದ ಮೊದಲ ದಿನ 2026-27ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರ 17ನೇ ಬಜೆಟ್‌ ಕೂಡ ಇದಾಗಲಿದೆ. ಬಜೆಟ್‌ ಮಂಡನೆ ದಿನ ಬಜೆಟ್‌ ಹೊರತುಪಡಿಸಿ ಬೇರೆ ವಿಚಾರಗಳ ಕಾರ್ಯಕಲಾಪಗಳು ಇರುವುದಿಲ್ಲ. ಮಾ.9 ರಿಂದ ಸರ್ಕಾರದ ಕಾರ್ಯಕಲಾಪಗಳು ಬಜೆಟ್‌ ಮೇಲಿನ ಚರ್ಚೆ ಮುಂದುವರೆಯಲಿದೆ. ಮಾ.31 ರ ವೇಳೆಗೆ 2026-27ನೇ ಸಾಲಿನ ಆಯವ್ಯಯಕ್ಕೆ ಉಭಯಸದನಗಳು ಅನುಮೋದನೆ ನೀಡಬೇಕಿದೆ. ಜಂಟಿ ಅಧಿವೇಶನ ಮುಕ್ತಾಯಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿವಿಧ ಇಲಾಖೆಗಳ ಬಜೆಟ್‌ ಪೂರ್ವಭಾವಿ ಸಭೆ ನಡೆಸಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಬಜೆಟ್‌ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಚರ್ಚೆಯಲ್ಲಿದ್ದು, ಕಾಂಗ್ರೆಸ್‌‍ ಹೈಕಮಾಂಡ್‌ ನಾಯಕತ್ವದ ಗೊಂದಲಕ್ಕೆ ತೆರೆ ಎಳೆದಿಲ್ಲ. ಆದರೂ ವಾಡಿಕೆಯಂತೆ ರಾಜ್ಯದಲ್ಲಿ ಬಜೆಟ್‌ ಸಿದ್ಧತೆ, ಅಧಿವೇಶನ ನಡೆಸಲು ಸಂಪುಟದ ಅನುಮೋದನೆ ಪಡೆಯುವ ಪ್ರಯತ್ನಗಳು ಜರುಗುತ್ತಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

24 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

1 hour ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago