Mysore
33
few clouds

Social Media

ಶನಿವಾರ, 07 ಮಾರ್ಚ್ 2026
Light
Dark

ರಾಜ್ಯ ಬಜೆಟ್‌: ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಬಜೆಟ್‌ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದೇವೆ.

ಬೆಂಗಳೂರಿನ 5 ಮಹಾನಗರ ಪಾಲಿಕೆಗಳಿಗೆ 1255 ಕೋಟಿ ಅನುದಾನ ನೀಡಲಾಗುತ್ತದೆ. ಬೆಂಗಳೂರಿನಲ್ಲಿ 1700 ಕೋಟಿ ವೆಚ್ಚದಲ್ಲಿ 158 ಕಿ.ಮೀ ವೈಟ್‌ ಟಾಫಿಂಗ್‌, 273 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿಗೆ ಮುಂದಾಗಿದ್ದೇವೆ. 1936 ಕೋಟಿ ವೆಚ್ಚದಲ್ಲಿ ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳ ಅಭಿವೃದ್ಧಿ ಮಾಡುತ್ತೇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ಮೀಸಲಿಟ್ಟಿದ್ದೇವೆ ಎಂದು ಹೇಳಿದರು.

Tags:
error: Content is protected !!