Mysore
23
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ರಾಜ್ಯ ಬಜೆಟ್‌: ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

17ನೇ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉದ್ಯೋಗದ ವಿಕೇಂದ್ರಿಕರಣಕ್ಕೆ ಒತ್ತು ನೀಡಲು ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.

ಹೆಚ್ಚುತ್ತಿರುವ ಟ್ರಾಫಿಕ್‌ ಹಾಗೂ ಜನದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರನ್ನು ಪರ್ಯಾಯ ಐಟಿ ತಾಣವನ್ನಾಗಿ ರೂಪಿಸಲಾಗುತ್ತಿದೆ.

ಈಗಾಗಲೇ ಹಲವು ಐಟಿ ಕಂಪನಿಗಳನ್ನು ಹೊಂದಿರುವ ಮೈಸೂರಿನಲ್ಲಿ ಮೂಲಸೌಕರ್ಯ ವೃದ್ಧಿಸಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸುವುದು ಸರ್ಕಾರದ ಗುರಿಯಾಗಿದೆ.

 

Tags:
error: Content is protected !!