Mysore
26
broken clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಮಾರ್ಚ್.‌6ರಂದು ರಾಜ್ಯ ಬಜೆಟ್‌ ಮಂಡನೆಗೆ ಚಿಂತನೆ

cm siddaramaiah

ಬೆಂಗಳೂರು: ಮುಂಬರುವ ಮಾರ್ಚ್‌ ತಿಂಗಳಲ್ಲಿ ಬಜೆಟ್‌ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಮಾರ್ಚ್.‌6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಮಾರ್ಚ್.‌5ರಿಂದ ಬಜೆಟ್‌ ಅಧಿವೇಶನ ಶುರುವಾಗುವ ಸಾಧ್ಯತೆ ಇದ್ದು, ಅಂದು ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಕಿತ್ತಾಟದ ಮಧ್ಯೆ ದಾಖಲೆಯ ಬಜೆಟ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನು ಈಗಾಗಲೇ ಮಂಡಿಸಿದ್ದು, ಮಾರ್ಚ್.‌6ರಂದು ಮಂಡಿಸುವ ಬಜೆಟ್‌ 17ನೇ ಬಜೆಟ್‌ ಆಗಲಿದೆ.

 

Tags:
error: Content is protected !!