ಬೆಂಗಳೂರು: ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಅಂತಿಮ ಹಂತದ ಬಜೆಟ್ ಪೂವಭಾವಿ ಸಭೆ ನಡೆಸುತ್ತಿದ್ದಾರೆ.
ಇಂದು (ಫೆ.25) ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಚೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕಳೆದ ನಾಲ್ಕೈದು ವಾರಗಳಿಂದ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಬಜೆಟ್ ಕುರಿತಾಗಿ ಚರ್ಚೆ ನಡೆಸುತ್ತಿದ್ದು, ಇಂದು ಕೊನೆಯ ಹಂತವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ.





