Mysore
17
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

stampede

ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ

ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags:
error: Content is protected !!