stampede
ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ
ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…