ರಾಜ್ಯ

ಸಂಕಷ್ಟದಲ್ಲಿ ರಾಜ್ಯ ರೈತರು: ಬಿವೈ ವಿಜಯೇಂದ್ರ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭ್ರಮೆಯಿಂದ ಹೊರಬಂದು ರಾಜ್ಯ ರೈತರ ವಿದ್ಯುತ್‌ ಸಂಕಷ್ಟದ ಕೊರತೆ ನಿವಾರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು (ಫೆ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಅಸರ್ಮಪಕವಾಗಿದ್ದು ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ದಿನಪೂರ್ತಿ ವಿದ್ಯುತ್‌ ಪೂರೈಸುತ್ತೇವೆ ಎಂದು ಹೇಳುತ್ತೀರಿ.ಆದರೆ, ಕನಿಷ್ಠ 6 ಗಂಟೆ ವಿದ್ಯುತ್‌ ಪೂರೈಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರೈತರನ್ನು ಸಂಕಷ್ಟಕ್ಕೆ ದೂಡಬಾರದು. ಒಂದು ವೇಳೆ ವಿದ್ಯುತ್‌ ಆಭಾವವಿದ್ದರೆ ಹೊರ ರಾಜ್ಯಗಳಿಂದ ಖರೀದಿಸಿ ರೈತರ ವಿದ್ಯುತ್‌ ಆಭಾವ ದೂರಮಾಡಿ ಎಂದು ಹೇಳಿದರು.

ವಿಶ್ವವಿದ್ಯಾಲಯಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ಅವೈಜ್ಞಾನಿಕ ಮತ್ತು ಅವಿವೇಕದ ತೀರ್ಮಾನ. ಯಾವುದೇ ಕಾರಣಕ್ಕೂ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಬಿಡಿವುದಿಲ್ಲ. ಈ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಒಂದು ಜಿಲ್ಲೆ ಒಂದು ವಿಶ್ವವಿದ್ಯಾಲಯ ಪರಿಕಲ್ಪನೆಯಡಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಹಣಕಾಸಿನ ಬಿಕ್ಕಟ್ಟನ್ನೆ ಆಧಾರವಾಗಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಬಾರದು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

7 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

8 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

9 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

9 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

10 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

10 hours ago