ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್‌ಗಳಲ್ಲಿ ಕೆಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಈ ಕುರಿತು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝೋನ್ ಹಾಗೂ ಸಾಹಸ ಕ್ರೀಡೆ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕು. ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳ ಮುನ್ನೆಚ್ಚರಿಕೆ ಅನುಸರಿಸಲು ಸೂಚನೆ ನೀಡಿದ್ದಾರೆ.
ಪತ್ರದಲ್ಲಿದಲ್ಲಿರುವುದು..
ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ (ಗೇಮ್ ಝನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿರುತ್ತದೆ. ಮಜನರಂಜನಾ ಕೇಂದ್ರ/ ಗೇಮಿಂಗ್ ರೋನ್‌ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿರ್ಬಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಲಾಗಿದೆ.