ರಾಜ್ಯ

ಗುಜಾರಾತ್‌ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತಾ ರಾಜ್ಯ ಸರ್ಕಾರ; ಮುಂಜಾಗ್ರತಾ ಕ್ರಮ ವಹಿಸಲು ಡಿಸಿಎಂ ಸೂಚನೆ

ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ಬೆಂಗಳೂರಿನ ಮಾಲ್‌ ಮತ್ತು ಗೇಮಿಂಗ್‌ ಝೋನ್‌ಗಳಲ್ಲಿ ಕೆಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಈ ಕುರಿತು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝೋನ್ ಹಾಗೂ ಸಾಹಸ ಕ್ರೀಡೆ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕು. ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳ ಮುನ್ನೆಚ್ಚರಿಕೆ ಅನುಸರಿಸಲು ಸೂಚನೆ ನೀಡಿದ್ದಾರೆ.

ಪತ್ರದಲ್ಲಿದಲ್ಲಿರುವುದು..

ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ (ಗೇಮ್ ಝನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿರುತ್ತದೆ. ಮಜನರಂಜನಾ ಕೇಂದ್ರ/ ಗೇಮಿಂಗ್ ರೋನ್‌ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿರ್ಬಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

41 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

56 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago