Mysore
28
clear sky

Social Media

ಗುರುವಾರ, 22 ಜನವರಿ 2026
Light
Dark

ಕಾರ್ಮಿಕರ ಏಳಿಗೆಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

minister santhosh lod

ಉತ್ರರ ಕನ್ನಡ: ಕಾರ್ಮಿಕರ ಏಳಿಗೆಗಾಗಿ ಕಾರ್ಮಿಕ ಇಲಾಖೆ ಕಟ್ಟಿಬದ್ಧವಾಗಿ ದುಡಿಯುತ್ತಿರುವುದಾಗಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕಾರ್ಮಿಕ ಇಲಾಖೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂತೋಷ್ ಲಾಡ್ ಮಾತನಾಡಿದರು.

ರಾಜ್ಯದಲ್ಲಿ ಪ್ರಸಕ್ತ ಆಡಳಿತರೂಢ ಕಾಂಗ್ರೆಸ್ ಸರ್ಕಾರದಲ್ಲಿ ತಾವು ಕಾರ್ಮಿಕ ಸಚಿವರಾದ ಬಳಿಕ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಏಳಿಗೆಗೆ ಹಲವು ಯೋಜನೆಗಳನ್ನು ತರಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಮಿಕ ಪರ ಇನ್ನಷ್ಟು ಯೋಜನೆಗಳು ಬರಲಿವೆ. ಕಾರ್ಮಿಕ ಇಲಾಖೆ ಮತ್ತು ಸರ್ಕಾರ ಕಾರ್ಮಿಕರ ಪರವಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾರ್ಮಿಕ ಇಲಾಖೆಯ ಯೋಜನೆಗಳನ್ನು ಪ್ರಚುರಪಡಿಸುವ ಜೊತೆ ಕಾರ್ಮಿಕರು ಅದರ ಲಾಭವನ್ನು ಪಡೆದುಕೊಳ್ಳಬೇಕು. ಕಾರ್ಮಿಕ ಇಲಾಖೆ ಕಾರ್ಮಿಕರ ಪರ ಎಂಬುದನ್ನು ಅರಿಯಬೇಕು.

ಇಲಾಖೆ ಯೋಜನೆಗಳನ್ನು ತಿಳಿಸುವ ಜೊತೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕಾರ್ಮಿಕರ ಸ್ಥಿತಿಗತಿ ಕುರಿತು ತಿಳಿಯುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಲಾಖೆಯಡಿ ವಿವಿಧ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಸಚಿವರು ಒತ್ತಿ ಹೇಳಿದರು.

Tags:
error: Content is protected !!