ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಬಳಕೆ ಮಾಡುವುದರ ಜತೆಗೆ ಜಾಹೀರಾತು ಹಾಗೂ ಸೂಚನಾ ಫಲಕಗಳಲ್ಲಿಯೂ ಕನ್ನಡವನ್ನು ಹೆಚ್ಚಾಗಿ ಬಳಕೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ್ದ ಸಿದ್ದರಾಮಯ್ಯ ಸುಗ್ರೀವಾಜ್ಞೆ ಮೂಲಕ ಕನ್ನಡ ಕಡ್ಡಾಯ ಮಾಡುವುದಾಗಿ ತಿಳಿಸಿದ್ದರು. ಅಲ್ಲದೇ ಸುಗ್ರೀವಾಜ್ಞೆಯ ಮೂಲಕ ಜಾರಿಯಾಗಲಿರುವ ತಿದ್ದುಪಡಿ ಕಾನೂನಿನ ಅನ್ವಯ 2024ರ ಫೆಬ್ರವರಿ 28ರ ಒಳಗೆ ರಾಜ್ಯದಲ್ಲಿನ ಎಲ್ಲಾ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನರಂಜನಾ ಕೇಂದ್ರ ಹೊಟೇಲ್ ಹಾಗೂ ಮುಂತಾದವುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡವನ್ನು ಬಳಸಬೇಕು, ಉಳಿದ 40% ಜಾಗದಲ್ಲಿ ಇತರೆ ಭಾಷೆ ಇರಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಅದರಂತೆ ನಿನ್ನೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದ್ದು, ರಾಜ್ಯಪಾಲರ ಅನುಮೋದನೆ ಬಿದ್ದ ಕೂಡಲೇ ಈ ತಿದ್ದುಪಡಿ ನಿಯಮ ಜಾರಿಗೆ ಬರಲಿದೆ.
ಏನಿದು ತಿದ್ದುಪಡಿ?
ಈ ಹಿಂದೆ 2023ರ ಮಾರ್ಚ್‌ನಲ್ಲಿ ಬಿಜೆಪಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್ 17 ( 6 ) ರ ಅಡಿಯಲ್ಲಿ ನಾಮಫಲಕಗಳಲ್ಲಿ ಶೇ.50 ರಷ್ಟು ಕನ್ನಡ ಇರಬೇಕು ಎಂದು ತಿಳಿಸಿತ್ತು. ಇದೀಗ ಈ ಕಾಯಿದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದ್ದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಲಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…