ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಶ್ವರ್ಯ ಗೌಡ ವಿರುದ್ಧ ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಸಿಡಿಆರ್ ಪ್ರಕರಣ ಹೊರತುಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ.
ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. ಈ ಬೆನ್ನಲ್ಲೇ ಮಾಜಿ ಸಂಸದ ಡಿ.ಕೆ.ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದ್ದು, ತನಿಖೆ ಮುಂದುವರಿಸಿದೆ.





