ರಾಜ್ಯ

ಧರ್ಮಸ್ಥಳ ಪ್ರಕರಣವನ್ನು SIT ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ದಕ್ಷಿಣ ಕನ್ನಡ : ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಾಜ್ಯ ಸರ್ಕಾರ ರಚಿಸಿದೆ.

ನಾಲ್ವರು ಐಪಿಎಸ್‌ ಅಧಿಕಾರಿಗಳನ್ನೊಳಗಿಂಡ ತಂಡ ಇದಾಗಿದ್ದು, ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್‌ ಮಹಾ ನಿರ್ದೇಶಕ ಎಂ.ಎನ್‌ ಅನುಚೇತನ್‌, ಸಿಎಆರ್‌ ಕೇಂದ್ರದ ಉಪ ಪೊಲೀಸ್‌ ಆಯುಕ್ತೆ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಅಧೀಕ್ಷಕ ಜಿತೇಂದ್ರ ಕುಮಾರ್‌ ದಯಾಮ ಇದ್ದಾರೆ.

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ತಾನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬರು ಈಚೆಗೆ ನ್ಯಾಯಾಲಯದಲ್ಲಿ ಹೇಳಿಕೆ ಕೊಟ್ಟಿದ್ದರು. ಎರಡು ದಶಕಗಳಲ್ಲಿ ಅತ್ಯಾಚಾರ, ಹತ್ಯೆ ಮತ್ತು ದೌರ್ಜನ್ಯಗಳೂ ಈ ಭಾಗದಲ್ಲಿ ನಡೆದಿವೆ ಎಂದು ಅವರು ಹೇಳಿದ್ದರು. ಇದರ ನಂತರ ಭಾರತೀಯ ನ್ಯಾಯ ಸಂಹಿತದ ಕಲಂ 211(ಎ) ಅಡಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಶೀಘ್ರದಲ್ಲೇ ತನಿಖಾ ತಂಡಕ್ಕೆ ವರ್ಗಾಯಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago