ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬರೀ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಬಿಟ್ಟರೇ ಬೇರೆ ಯಾವುದೇ ಯೋಜನೆಗಳು ನಡೆಯುತ್ತಿಲ್ಲ. ಯಡಿಯೂರಪ್ಪ ಸರ್ಕಾರ ಇದ್ದಾಗ ಬಡವರಿಗೆ ಅನೇಕ ಯೋಜನೆಗಳು ಇದ್ದವು. ಅವೆಲ್ಲವನ್ನು ಕಾಂಗ್ರೆಸ್ ಸರ್ಕಾರ ಮರೆತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತದೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಇನ್ನು ವಸತಿ ನಿಗಮದಲ್ಲಿ ನಡೆದಿರುವ ಗೋಲ್‌ಮಾಲ್ ವಿಚಾರ ಪ್ರಸ್ತಾಪಿಸಿರುವ ಶಾಸಕ ಬಿ.ಆರ್.ಪಾಟೀಲ್‌ಗೆ ಕಾಂಗ್ರೆಸ್ ನಾಯಕರೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದರು.
ಪಾಟೀಲ್ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಅಲ್ಲಿಯೂ ಸಹ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲ್‌ರನ್ನು ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…