ರಾಜ್ಯ

ರಾಜ್ಯ ಸರ್ಕಾರ ಬಡವರು ಹಾಗೂ ರೈತರಿಗೆ ಶಾಪವಾಗಿ ಪರಿಣಮಿಸಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದ ಬರೀ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಬಿಟ್ಟರೇ ಬೇರೆ ಯಾವುದೇ ಯೋಜನೆಗಳು ನಡೆಯುತ್ತಿಲ್ಲ. ಯಡಿಯೂರಪ್ಪ ಸರ್ಕಾರ ಇದ್ದಾಗ ಬಡವರಿಗೆ ಅನೇಕ ಯೋಜನೆಗಳು ಇದ್ದವು. ಅವೆಲ್ಲವನ್ನು ಕಾಂಗ್ರೆಸ್‌ ಸರ್ಕಾರ ಮರೆತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತದೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಇನ್ನು ವಸತಿ ನಿಗಮದಲ್ಲಿ ನಡೆದಿರುವ ಗೋಲ್‌ಮಾಲ್‌ ವಿಚಾರ ಪ್ರಸ್ತಾಪಿಸಿರುವ ಶಾಸಕ ಬಿ.ಆರ್.‌ಪಾಟೀಲ್‌ಗೆ ಕಾಂಗ್ರೆಸ್‌ ನಾಯಕರೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದರು.

ಪಾಟೀಲ್‌ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಅಲ್ಲಿಯೂ ಸಹ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲ್‌ರನ್ನು ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

11 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

12 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

12 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

12 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

13 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

16 hours ago