ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಮೈಸೂರು, ಹಾಸನ ಮತ್ತು ಬೆಂಗಳೂರು ಗ್ರಾಮಾಂತರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಮೈಸೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾಗಿದ್ದ ಆರ್.ಶಿವಕುಮಾರ್ ಅವರನ್ನು ರಾಯಚೂರು ಜಿಲ್ಲೆಗೆ ಹೆಚ್ಚುವರಿ ಪಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಹಾಸನ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಎನ್ ನಂದಿನಿ ಅವರನ್ನು ಮೈಸೂರು ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಕೋಲಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದದ ಎಂ ಎಲ್ ಪುರುಪೋತ್ತಮ್ ಅವರನ್ನು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರದಲ್ಲಿದ್ದ ಲಕ್ಷೀ ಗಣೇಶ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.