ರಾಜ್ಯ

ರಾಜ್ಯ ಸರ್ಕಾರ ನಮ್ಮಿಂದ ಅಕ್ಕಿ ಖರೀದಿಸುತ್ತಿಲ್ಲ: ಸಚಿವ ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಕಿಲೋಗೆ ಕನಿಷ್ಠ 22.50 ರೂ.ಗೆ ಅಕ್ಕಿ ನೀಡುತ್ತೇವೆ ಎಂದರು ರಾಜ್ಯ ಸರ್ಕಾರ ನಮ್ಮಿಂದ ಅಕ್ಕಿ ಖರೀದಿಸುತ್ತಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ಕಿಲೋಗೆ 22.50 ರೂಗೆ ಅಕ್ಕಿ ನೀಡುವ ಮೂಲಕ 10 ರೂ. ರಿಯಾಯಿತಿ ನೀಡುತ್ತಿದೆ. ಆದರೆ, ಕಾಂಗ್ರೆಸ್‌ ನೇತೃತ್ವದ ಸರ್ಕಾರ ಸ್ವೀಕರಿಸಲು ಸಿದ್ದವಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಪ್ರಸ್ತುತ ಪ್ರತಿ ಕಿಲೋಗೆ 34ರೂ. ನೀಡಿ ಅಕ್ಕಿ ಖರೀದಿಸುತ್ತಿದೆ. ಕೇಂದ್ರ ಸರ್ಕಾರ ನೀಡುವ ದರದಲ್ಲಿ ಅಕ್ಕಿ ಖರೀದಿಸಿದರೆ, ವಾರ್ಷಿಕವಾಗಿ 2,280 ಕೋಟಿ ರೂ. ಉಳಿಸಬಹುದು. ಆದರೆ, ಉದ್ದೇಶಪೂರ್ವಕವಾಗಿಯೇ ಈ ಅವಕಾಶವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದ ಹಣ ಫಲಾನುಭವಿಗಳ ಖಾತೆಗೆ ಇನ್ನು ಜಮಾವಣೆ ಆಗಿಲ್ಲ. ರಾಜ್ಯ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಸಚಿವ ಮುನಿಯಪ್ಪ ಭೇಟಿ ಮಾಡಿ ಹೋದರೂ ಅಕ್ಕಿ ಆರ್ಡರ್‌ ಮಾಡಿಲ್ಲ. ಏಕೆಂದರೆ ಖರೀದಿಸಲು ಅವರ ಬಳಿ ದುಡ್ಡಿಲ್ಲ ಎಂದು ವ್ಯಂಗ್ಯವಾಡಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

7 hours ago