Mysore
30
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಹೆಸರು ಮುದ್ರಣ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಉಮಾದೇವಿ ಅವರು, ಕರ್ನಾಟಕ ರಾಜ್ಯದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಪ್ರತಿಯೊಂದು ಕೂಡ ಬೇರೆ ಭಾಷೆಯೊಂದಿಗೆ ಕನ್ನಡದಲ್ಲಿಯೂ ಇರಬೇಕು ಎಂದು ಉಲ್ಲೇಖಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ಸರ್ಕಾರವೂ, ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯೊಂದಿಗೆ ಕನ್ನಡದಲ್ಲಿಯೂ ಸಹ ಇರಬೇಕು ಎಂದು ತಿಳಿಸಿದ್ದಾರೆ.

Tags:
error: Content is protected !!