ರಾಜ್ಯ

ಜಾತಿ ಗಣತಿ ಅಂಗೀಕರಿಸುವ ಹಠಕ್ಕೆ ರಾಜ್ಯ ಸರ್ಕಾರ ಬೀಳಬಾರದು: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ರಾಜ್ಯ ಸರ್ಕಾರ ಜಾತಿ ಗಣತಿಯನ್ನು ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಇಂದು ದಾವಣಗೆರೆಯ ಎಂಬಿಎ ಮೈದಾನದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭೆಯ 24 ನೇ ಮಹಾ ಅಧಿವೇಶನದ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಅವರು, ಸರ್ವರ ಭಾವನೆಗಳಿಗೆ ಬೆಲೆ ಕೊಡಬೇಕು. ಕಾಂತರಾಜ ಆಯೋಗದ ವರದಿಯಲ್ಲಿ ಹತ್ತಾರು ದೋಷಗಳಿದ್ದು, ಇದನ್ನ ಅಂಗೀಕರಿಸುವುದು ಬೇಡ ಎಂದು ಸರ್ಕಾರಕ್ಕೆ ಸೂಚಿಸಿದರು.

ಜಾತಿ ಗಣತಿ ವರದಿ ಸಮರ್ಪಕವಾಗಿಲ್ಲ, ಮೇಲಾಗಿ ಯಾವ ಜಾತಿಯ ಜನ ಸಂಖ್ಯೆ ಎಷ್ಟಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಹೀಗೆ ಮಾಧ್ಯಮಗಳಲ್ಲಿ ಬಹಿರಂಗವಾಗಿ ಬಂದ ವರದಿಯನ್ನ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಥವಾ ರಾಜ್ಯ ಸರ್ಕಾರ ಅಲ್ಲಗಳೆದಿಲ್ಲ. ಈ ಎಲ್ಲ ಕಾರಣಕ್ಕೆ ಜಾತಿ ಗಣತಿ ಅಂಗೀಕಾರ ಬೇಡ. ಈ ವಿಚಾರದಲ್ಲಿ ಸರ್ಕಾರ ಹಟಕ್ಕೆ ಬಿಳಬಾರದು. ನಮ್ಮದು ಸರ್ವಜ‌ನಾಂಗದ ಶಾಂತಿಯ ತೋಟ. ಜಾತಿ ಗಣತಿ ಅಂಗೀಕಾರ ಬೇಡ ಎಂದು ಶಾಮನೂರ ಹೇಳಿದ್ದಾರೆ.

andolanait

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

38 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago