ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು.
ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ತಾಯಿಯ ದರ್ಶನ…
ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…
ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…
ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…