Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಡೆಂಗ್ಯೂ ಸಾಂಕ್ರಾಮಿಕ ರೋಗ: ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್‌ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ.

ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್‌ 3ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್‌ 4 ಮತ್ತು 16ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು ರಾಜ್ಯ ಸರ್ಕಾರವು ಹಲವು ನಿಯಮಗಳನ್ನು ರೂಪಿಸಿದೆ.

ಜನರಲ್ಲಿ ಮೈಬಿಸಿ ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ ಮತ್ತು ವಾಕರಿಕೆ ಕಾಣಿಸಿಕೊಳ್ಳುವುದು ಡೆಂಗ್ಯೂ ರೋಗದ ಪ್ರಮುಖ ಲಕ್ಷಣಗಳಾಗಿದೆ.

ಈಡಿಸ್‌ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

 

Tags: