ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ.
ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 3ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 4 ಮತ್ತು 16ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು ರಾಜ್ಯ ಸರ್ಕಾರವು ಹಲವು ನಿಯಮಗಳನ್ನು ರೂಪಿಸಿದೆ.
ಜನರಲ್ಲಿ ಮೈಬಿಸಿ ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ ಮತ್ತು ವಾಕರಿಕೆ ಕಾಣಿಸಿಕೊಳ್ಳುವುದು ಡೆಂಗ್ಯೂ ರೋಗದ ಪ್ರಮುಖ ಲಕ್ಷಣಗಳಾಗಿದೆ.
ಈಡಿಸ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…