Mysore
19
scattered clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಎಸ್‌ಸಿ ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಕೂಡ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್.ಕೆ.ಪಾಟೀಲ್‌ ಅವರು, ಒಳ ಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

 

Tags: