Mysore
20
overcast clouds
Light
Dark

ಶೇ.50ರಷ್ಟು ಗ್ಯಾರಂಟಿ ಕಡಿತಕ್ಕೆ ತಯಾರಿ: ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಹೊಸ ಬಾಂಬ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಗ್ಯಾರಂಟಿ ಫಲಾನುಭವಿಗಳಲ್ಲಿ ಶೇಕಡಾ ೫೦ರಷ್ಟು ಕಡಿಮೆ ಮಾಡಲು ತಯಾರಿ ನಡೆಸಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.‌ಅಶೋಕ್‌ ಆರೋಪಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ. ರೈತರಿಗೆ ಹಾಲಿನ ಪ್ರೋತ್ಸಾಹಧನವನ್ನೂ ಕೂಡ ನೀಡಿಲ್ಲ ಎಂದು ಕಿಡಿಕಾರಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ೧೪೩ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ಈಗಲೂ ವಿಧಾನಸಭೆ ಚುನಾವಣೆ ನಡೆದರೆ, ನಾವು ೧೪೩ ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಬೆನ್ನಿಗೆ ಚೂರಿ ಹಾಕಿದ ನಂತರ ದೇವೇಗೌಡರು ಮೈತ್ರಿಗೆ ಜೈ ಎಂದರು. ಆದರೆ, ಮೊದಲೇ ತೀರ್ಮಾನ ಮಾಡಿದ್ದರೆ, ಎನ್‌ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತಿತ್ತು ಎಂದರು.