ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಫಲಾನುಭವಿಗಳಲ್ಲಿ ಶೇಕಡಾ ೫೦ರಷ್ಟು ಕಡಿಮೆ ಮಾಡಲು ತಯಾರಿ ನಡೆಸಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ. ರೈತರಿಗೆ ಹಾಲಿನ ಪ್ರೋತ್ಸಾಹಧನವನ್ನೂ ಕೂಡ ನೀಡಿಲ್ಲ ಎಂದು ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ೧೪೩ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ಈಗಲೂ ವಿಧಾನಸಭೆ ಚುನಾವಣೆ ನಡೆದರೆ, ನಾವು ೧೪೩ ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಬೆನ್ನಿಗೆ ಚೂರಿ ಹಾಕಿದ ನಂತರ ದೇವೇಗೌಡರು ಮೈತ್ರಿಗೆ ಜೈ ಎಂದರು. ಆದರೆ, ಮೊದಲೇ ತೀರ್ಮಾನ ಮಾಡಿದ್ದರೆ, ಎನ್‌ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತಿತ್ತು ಎಂದರು.
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ…
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…