ಬೆಂಗಳೂರು: 60 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕವಾಗಿ ದಿವಾಳಿಯಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಅಕ್ರಮ ಬಿಪಿಎಲ್ ಪಡಿತರದಾರರಿಗೆ ಚಾಟಿ ಬೀಸಲು ಮುಂದಾಗಿದೆ.
ಇದನ್ನೇ ಈಗ ಬಿಜೆಪಿ ಅಸ್ತ್ರ ಮಾಡಿಕೊಂಡಿದೆ. 60 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ ಎಂದು ಆರೋಪಿಸಿದರು.
ಬಿಪಿಎಲ್ ಕಾರ್ಡ್ ರದ್ದಿಗೆ ಸರ್ಕಾರ ಹಲವು ಕಠಿಣ ನಿಬಂಧನೆ ಹಾಕಲು ಮುಂದಾಗಿದೆ. ಗುಡಿಸಲಿನಲ್ಲಿದ್ದವರಿಗೆ ಮಾತ್ರ ಗ್ಯಾರಂಟಿಗಳು ಸಿಗಬೇಕು ಎಂದು ಯೋಜನೆ ಮಾಡಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ. ನೌಕರರಿಗೆ ಸಂಬಳ ಕೊಡಲು ಕೂಡ ಹಣವಿಲ್ಲ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಕಿಡಿಕಾರಿದರು.





