ರಾಜ್ಯ

ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಾಮಾಜಿಕ ಹೋರಾಟಗಾರರಾದ ಕೆ.ಆರ್‌ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ ಧನಿ ಎತ್ತುವ ಮೂಲಕ ನ್ಯಾಯ ಕೊಡಿಸಿದ ನನಗೆ ಇಂದು ನ್ಯಾಯ ಸಿಗುತ್ತಿಲ್ಲ. ಪೊಲೀಸರಿಂದ ಸರಿಯಾದ ಸ್ಪಂದನೆ ಹಾಗೂ ತನಿಖೆ ನಡೆಯುತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸೌಮ್ಯ ಅವರು ಆಗ್ರಹಿಸಿದ್ದರು.

ಇದೇ ಮೇ.15 ರಂದು ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದ್ವತೀಯ ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ ಅವರ ಕೊಲೆಯಾಗಿತ್ತು. ಈ ಬಗ್ಗೆ ಅವರ ತಾಯಿ ಸಿಐಡಿ ತನಿಖೆಯಾಗಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದರು.

ಈ ಮನವಿಯನ್ನು ಪುರಸ್ಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

52 mins ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

58 mins ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

59 mins ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

1 hour ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

1 hour ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

1 hour ago