ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಹಾಗೂ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಪ್ರಶ್ನಿಸಿ ಕೆ. ಮಲ್ಲಿಕಾರ್ಜುನ ಎಂಬಾತ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಆರ್.ದೇವದಾಸ್ ಅವರಿದ್ದ ಪೀಠ ಇಂದಿನ ಪ್ರಮಾಣವಚನ ಸಮಾರಂಭಕ್ಕೆ ತಡೆ ನೀಡಲು ನಿರಾಕರಿಸಿದೆ.
ಅಲ್ಲದೇ, ದಾಖಲೆ ಪರಿಶಿಲನೆ ನಂತರ ಆದೇಶದ ಬಗ್ಗೆ ತೀರ್ಮಾನ ಮಾಡಲಾಗುವುದು. ಇಂದಿನ ಅಧಿಕಾದ ಸ್ವೀಕಾರ ಹೈಕೋರ್ಟ್‌ನ ಆದೇಶಕ್ಕೆ ಒಳಪಡುತ್ತದೆ ಎಂದು ಆದೇಶ ಹೊರಡಿಸಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಶೋಧನಾ ಸಮಿತಿ ಶಿಫಾರಸ್ಸಿನ ಮೇರೆಗೆ ಮಾಹಿತಿ ಆಯೋಗದ ಆಯುಕ್ತರ ನೇಮಕವಾಗಬೇಕು. ಆದರೆ ಸುಪ್ರೀಂ ಕೋರ್ಟ್‌ನ ನಿಯಮ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯೆಯಾಗಿ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸುಪ್ರೀಂ ಕೋರ್ಟ್ ಈ ಕುರಿತು ವಿಚಾರಣೆ ನಡೆಸುತ್ತಿದೆ, ಇಂದಿನ ಸಮಾರಂಭಕ್ಕೆ ತಡೆ ನೀಡಬಾರದು ಎಂದು ವಾದಿಸಿದ್ದರು.





