ರಾಜ್ಯ

ರಾಜ್ಯ ಮಾಹಿತಿ ಆಯುಕ್ತರ ಪ್ರಮಾಣವಚನ: ತಡೆ ನೀಡಲು ‘ಹೈ’ ನಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಹಾಗೂ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ.

ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕಾತಿ ಪ್ರಶ್ನಿಸಿ ಕೆ. ಮಲ್ಲಿಕಾರ್ಜುನ ಎಂಬಾತ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಆರ್‌.ದೇವದಾಸ್‌ ಅವರಿದ್ದ ಪೀಠ ಇಂದಿನ ಪ್ರಮಾಣವಚನ ಸಮಾರಂಭಕ್ಕೆ ತಡೆ ನೀಡಲು ನಿರಾಕರಿಸಿದೆ.

ಅಲ್ಲದೇ, ದಾಖಲೆ ಪರಿಶಿಲನೆ ನಂತರ ಆದೇಶದ ಬಗ್ಗೆ ತೀರ್ಮಾನ ಮಾಡಲಾಗುವುದು. ಇಂದಿನ ಅಧಿಕಾದ ಸ್ವೀಕಾರ ಹೈಕೋರ್ಟ್‌ನ ಆದೇಶಕ್ಕೆ ಒಳಪಡುತ್ತದೆ ಎಂದು ಆದೇಶ ಹೊರಡಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಶೋಧನಾ ಸಮಿತಿ ಶಿಫಾರಸ್ಸಿನ ಮೇರೆಗೆ ಮಾಹಿತಿ ಆಯೋಗದ ಆಯುಕ್ತರ ನೇಮಕವಾಗಬೇಕು. ಆದರೆ ಸುಪ್ರೀಂ ಕೋರ್ಟ್‌ನ ನಿಯಮ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ‌, ಸುಪ್ರೀಂ ಕೋರ್ಟ್‌ ಈ ಕುರಿತು ವಿಚಾರಣೆ ನಡೆಸುತ್ತಿದೆ, ಇಂದಿನ ಸಮಾರಂಭಕ್ಕೆ ತಡೆ ನೀಡಬಾರದು ಎಂದು ವಾದಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago