ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಿವಿಮಾತು ಹೇಳಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾಆದಾಯ ಹೆಚ್ಚಾಗುತ್ತದೆ ಎಂದರು.
ಸಾರ್ವಜನಿಕ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆಯ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.
ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…