ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ ‘ಕರ್ತವ್ಯ ಪಥ’ದ ಪಥ ಸಂಚಲನದಲ್ಲಿ ಭಾಗವಹಿಸುತ್ತಿರುವ “ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು” ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ ಹಂತದ ಸಿದ್ಧತೆಗಳು ಪೊಲೀಸ್ ಬಿಗಿಭದ್ರತೆ ಇರುವ ರಾಷ್ಟ್ರೀಯ ರಂಗಶಾಲಾ ಶಿಬಿರದಲ್ಲಿ ಭರದಿಂದ ಸಾಗುತ್ತಿದೆ.
ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಾದ ಎಂ.ಇಮಕೊಂಗ್ಲ್ ಜಮೀರ್ ಅವರು ರಾಷ್ಟ್ರೀಯ ರಂಗಶಾಲಾ ಶಿಬಿರಕ್ಕೆ ಶುಕ್ರವಾರದಂದು ಭೇಟಿ ನೀಡಿ, ಸ್ತಬ್ಧಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಧಿಕಾರಿಗಳು ರಾಜ್ಯ ಸ್ತಬ್ಧಚಿತ್ರದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ನವದೆಹಲಿಯ ಕರ್ನಾಟಕ ಭವನದ ಸಹಾಯ ನಿವಾಸಿ ಆಯುಕ್ತರೂ ಆದ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಸಿ.ಮೋಹನ ಕುಮಾರ್, ವ್ಯವಸ್ಥಾಪಕರಾದ ಕೆ.ಆರ್.ವೆಂಕಟೇಶ, ನವದೆಹಲಿಯ ಕರ್ನಾಟಕ ವಾರ್ತಾ ಕೇಂದ್ರದ ಪ್ರಭಾರ ಉಪ ನಿರ್ದೇಶಕಿ ಎಂ.ಶಾಲಿನಿ, ಪ್ರತಿರೂಪಿ ಸಂಸ್ಥೆಯ ರಾಜಕುಮಾರ್ ಉಪಸ್ಥಿತರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…