ಬೆಂಗಳೂರು : ತಮ್ಮ ಬಹುದಿನಗಳ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದು, ನಾಳೆಯಿಂದ(ಏ.21) ಮುಷ್ಕರಕ್ಕೆ ಧುಮುಕಲಿದ್ದಾರೆ.
ಶೇಕಡಾ 7 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಆದರೆ ಶೇಕಡಾ 25 ರಷ್ಟು ವೇತನ ಹೆಚ್ಚಳಕ್ಕೆ ನೌಕರರು ಪಟ್ಟು ಹಿಡಿದಿದ್ದಾರೆ. ವೇತನ ಏರಿಕೆ ಮಾಡದ ಸರ್ಕಾರದ ವಿರುದ್ದ ಮತ್ತೊಂದು ಹಂತದ ಹೋರಾಟಕ್ಕೆ ನೌಕರರು ಸಜ್ಜಾಗಿದ್ದು, ನಾಳೆಯಿಂದ ಧರಣಿಗೆ ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಹಾಗೂ ನಾಲ್ಕು ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿದೆ. ಸಾರಿಗೆ ನೌಕರರು ಭರವಸೆ ಈಡೇರಿಸುವಂತೆ ಪಟ್ಟು ಹಿಡಿದಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾದರೆ ಅಂತಹ ನೌಕರರ ವಿರುದ್ಧ ಶಿಸ್ತುಕ್ರಮ ಇಲ್ಲವೇ ಸೇವೆಯಿಂದ ಅಮಾನತುಪಡಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಆದರೆ ಇದಾವುದಕ್ಕೂ ಜಗ್ಗದ ನೌಕರರು ತಾವು ಪ್ರತಿಭಟನೆ ನಡೆಸಿಯೇ ತೀರುತ್ತೇವೆ ಎಂದು ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ.
ಫ್ರೀಡಂ ಪಾರ್ಕ್‌ನಲ್ಲಿ ಧರಣಿ
ಕರ್ತವ್ಯಕ್ಕೆ ಗೈರಾಗಿ ಸಾವಿರಾರು ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾದ ನೌಕರರಿಗೆ ನಿಗಮಗಳು ಶಾಕ್ ಕೊಟ್ಟಿದ್ದು, ನೌಕರರ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ. ವಾರದ ರಜೆ, ದೀರ್ಘಾವಧಿ ರಜೆ ಹೊರತುಪಡಿಸಿ ಎಲ್ಲರೂ ಹಾಜರಾಗಬೇಕು. ಬೇಕಾಬಿಟ್ಟಿ ರಜೆ ಹಾಕಿ ಪ್ರತಿಭಟನೆಯಲ್ಲಿ ಕುಳಿತುಕೊಂಡರೆ ಸಸ್ಪೆಂಡ್ ಮಾಡುವ ಎಚ್ಚರಿಕೆ ನೀಡಿದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿಯಿಂದ ನೌಕರರಿಗೆ ಸೂಚನೆ ನೀಡಲಾಗಿದೆ.
ನೌಕರರ ಬೇಡಿಕೆಗಳು ಏನು?
2020-2023ರ ಮೂರು ವರ್ಷ 2 ತಿಂಗಳು ವೇತನ ಬಿಡುಗಡೆ
38 ತಿಂಗಳ ಹಿಂಬಾಕಿ ಹಣ ಪಾವತಿ
2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ
ಸರ್ಕಾರದ ವಾದವೇನು?
2024ರ ಬದಲು 2026ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ
38 ತಿಂಗಳ ಬದಲು 18/20 ತಿಂಗಳ ಹಿಂಬಾಕಿ ಬಿಡುಗಡೆ
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…