ರಾಜ್ಯ

ರಾಜ್ಯದಲ್ಲಿ ರೂ. 1,245 ಕೋಟಿ ಹೂಡಿಕೆ: ದಕ್ಷಿಣ ಕೊರಿಯಾದ ವೈಜಿ-1 ಕಂಪನಿ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ರೂ 1,245 ಕೋಟಿ ಹೂಡಿಕೆ ಮಾಡುವುದಾಗಿ ದಕ್ಷಿಣ ಕೊರಿಯಾದ ಜಾಗತಿಕ ಮಟ್ಟದ ಟೂಲ್ಸ್‌ ತಯಾರಿಕಾ ಕಂಪನಿ ವೈಜಿ-1 ಘೋಷಿಸಿದೆ.

ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ ಐದು ದಿನಗಳ ಭೇಟಿ ಕೈಗೊಂಡಿದೆ.  ಈ ಬಗ್ಗೆ ಬುಧುವಾರ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪನಿಯು ಈ ಘೋಷಣೆ ಮಾಡಿದೆ.

ಕರ್ನಾಟಕದಲ್ಲಿ ಕೊರಿಯಾ ಭಾಷೆ, ಕಲಿಕಾ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಇಂಧನ – ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಾಧುನಿಕ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಕಂಪನಿಯ ಮುಖ್ಯಸ್ಥ ಹೊ ಕ್ಯೂನ್‌ ಸಾಂಗ್‌ ಅವರು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

42 mins ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

2 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

2 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

3 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

3 hours ago